ಕಲಬುರಗಿಯಲ್ಲಿ ಕೃಷಿ ಮಸೂದೆ ವಿರುದ್ಧ ಜನಾಕ್ರೋಶ: ಡಿಸಿ ಕಚೇರಿ ಮುಂದೆ ಪ್ರತಿಭಟನೆ

Update: 2020-09-28 06:35 GMT

ಕಲಬುರಗಿ, ಸೆ.28: ಕೃಷಿ ಮಸೂದೆ ವಿರೋಧಿಸಿ ಇಂದು ಕರ್ನಾಟಕದ್ಯಂತ ಹಲವು ರೈತ ಸಂಘಟನೆಗಳು ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ರೈತ ಪರ, ಕನ್ನಡ ಪರ ಸಂಘಟನೆಗಳು, ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದವು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಟೈಯರ್ ಗೆ ಬೆಂಕಿ ಹಚ್ಚಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ಕನ್ನಡ ಪರ ಸಂಘಟನೆಗಳು ಟ್ರ್ಯಾಕ್ಟರ್ ನಲ್ಲಿ ಏರಿ ನೂತನ ಸುಗ್ರೀವಾಜ್ಞೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದವು.

ಇದೇ ರೀತಿ ಇಂದು ಬೆಳಗ್ಗೆಯಿಂದ ಸಿಪಿಐಎಂ ಮುಖಂಡರು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದು, ಸಾರಿಗೆ ಬಸ್ ಸಂಚಾರ ಪೂರ್ಣವಾಗಿ ಸ್ತಬ್ಧವಾಗಿತ್ತು. ಅಲ್ಲದೇ ಜಿಲ್ಲಾ ಪೊಲೀಸ್ ಇಲಾಖೆ ಕೇಂದ್ರ ಬಸ್ ನಿಲ್ದಾಣ ಸೂಕ್ತ ಬಂದೋಬಸ್ತ್ ವಹಿಸಿದ್ದು, ಬ್ಯಾರಿಕೇಡ್ ಹಾಕಿ ಮುನ್ನೆಚ್ಚರಿಕಾ ಕ್ರಮ ಕೈಗೊಳಲಾಗಿದೆ.  .

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News