ಶಿವಮೊಗ್ಗದಲ್ಲಿ ಭಾರೀ ಪ್ರತಿಭಟನಾ ಮೆರವಣಿಗೆ

Update: 2020-09-28 07:14 GMT

ಶಿವಮೊಗ್ಗ, ಸೆ.28: ಕೇಂದ್ರ ಮತ್ತು ರಾಜ್ಯ ಸರಕಾರಗಳ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ವಿದ್ಯುತ್ ಶಕ್ತಿ ಕಾಯ್ದೆಗಳು ರೈತ ವಿರೋಧಿ, ಜನ ವಿರೋಧಿ ಕಾಯ್ದೆಗಳಾಗಿವೆ ಎಂದು ಆರೋಪಿಸಿ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಶಿವಮೊಗ್ಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

 ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ಬಂದ್ ಕೇವಲ ಮೇರವಣಿಗೆಗೆ ಸೀಮಿತವಾಯಿತು. ಪ್ರತಿಭಟನಾ ಮೆರವಣಿಗೆ ನಗರದ ಖಾಸಗಿ ಬಸ್ ನಿಲ್ದಾಣದಿಂದ ಪ್ರಾರಂಭವಾಗಿ ನಗರದ ನೆಹರು ರಸ್ತೆ, ಗೋಪಿ ವೃತ್ತ, ಮಹಾವೀರ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಮೂಲಕ ಸಾಗಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರಧಾನಿಯಿಂದ ಹುಚ್ಚುತನದ ನಿರ್ಧಾರ: ಎಚ್.ಆರ್.ಬಸವರಾಜಪ್ಪ

ಪ್ರತಿಭಟನೆಯನ್ನುದ್ದೇಶಿಸಿ ರೈತ ಮುಖಂಡ ಎಚ್.ಆರ್.ಬಸವರಾಜಪ್ಪ ಮಾತನಾಡಿ, ಪ್ರಧಾನಿಯವರಿಗೆ ಅಧಿಕಾರದ ಮದ ಏರಿದೆ. ಬಹುಮತ ಇದೆ ಅಂತ ಹುಚ್ಚಿನ ನಿರ್ಧಾರ ತೆಗೆದುಕೊಂಡು ರೈತ ವಿರೋಧಿ ಕಾಯ್ದೆಗಳನ್ನು  ಜಾರಿಗೆ ತಂದಿದ್ದಾರೆ. ರೈತರಿಗೆ ಈ ಕಾಯ್ದೆಗಳ ಅವಶ್ಯಕತೆ ಇರಲಿಲ್ಲ. ಕಾರ್ಪೋರೇಟ್ ಕಂಪೆನಿಗಳನ್ನು ಸಂತೃಪ್ತಪಡಿಸಲು ಭೂ ಸುಧಾರಣೆ, ಎಪಿಎಂಪಿ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕೋಮು ಸೌಹಾರ್ದ ವೇದಿಕೆ ಮುಖಂಡ ಕೆ.ಎಲ್.ಅಶೋಕ್, ಜನ ಸಂಗ್ರಾಮ ಪರಿಷತ್ ಜಿಲ್ಲಾ ಸಂಚಾಲಕ, ವಕೀಲ ಕೆ.ಪಿ.ಶ್ರೀಪಾಲ್, ಮಾಜಿ ಶಾಸಕರಾದ ಶಾರದಾ ಪೂರ್ಯನಾಯ್ಕ್, ಕೆ.ಬಿ.ಪ್ರಸನ್ನ ಕುಮಾರ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ ಸೇರಿದಂತೆ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News