ಯಾದವ (ಗೊಲ್ಲ) ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಯಡಿಯೂರಪ್ಪ

Update: 2020-09-28 12:06 GMT

ಬೆಂಗಳೂರು, ಸೆ. 28: ರಾಜ್ಯದಲ್ಲಿ ಯಾದವ (ಗೊಲ್ಲ) ಜನಾಂಗದ ಅಭಿವೃದ್ಧಿಗಾಗಿ ‘ಗೊಲ್ಲ ಅಭಿವೃದ್ಧಿ ನಿಗಮ’ ಸ್ಥಾಪಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಅಗತ್ಯ ಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. 

ರಾಜ್ಯದಲ್ಲಿ ಗೊಲ್ಲ ಜನಾಂಗದವರು ಗಣನೀಯವಾಗಿದ್ದಾರೆ. ಅವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಶಿರಾ ಉಪ ಚುನಾವಣೆ ಮೇಲೆ ಕಣ್ಣಿಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿಕೊಳ್ಳುವ ಉದ್ದೇಶದಿಂದಲೇ ಕೊನೆಯ ಕ್ಷಣದಲ್ಲಿ ಗೊಲ್ಲ ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News