ಕಾಂಗ್ರೆಸ್ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Update: 2020-09-28 12:46 GMT

ಉಡುಪಿ, ಸೆ.28: ಉಡುಪಿ ತಾಪಂ ಮಾಜಿ ಸದಸ್ಯ ಉಮೇಶ್ ನಾಯ್ಕ ಚೇರ್ಕಾಡಿ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು ತಮ್ಮ ಬೆಂಬಲಿಗರೊಂದಿಗೆ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ನಡೆದ ಸಮಾರಂಭ ದಲ್ಲಿ ಉಮೇಶ್ ನಾಯ್ಕ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ರಾಘವೇಂದ್ರ ಜೆ.ಬಿ., ಹಾರಾಡಿ ಗ್ರಾಪಂ ಮಾಜಿ ಅಧ್ಯಕ್ಷೆ ಜಯಲಕ್ಷ್ಮೀ ಶೆಟ್ಟಿ, ನೀಲಾವರ ಗ್ರಾಪಂ ಮಾಜಿ ಉಪಾಧ್ಯಕ್ಷ ರಮೇಶ್ ಪೂಜಾರಿ, ಗ್ರಾಪಂ ಮಾಜಿ ಸದಸ್ಯರಾದ ಗುರುರಾಜ್ ರಾವ್, ಹೇಮಾವತಿ ಬಾಸ್ರಿ ಸೇರಿದಂತೆ ಹಲವು ಮಂದಿಯನ್ನು ಶಾಸಕ ಕೆ.ರಘುಪತಿ ಭಟ್ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ನಗರ ಅಧ್ಯಕ್ಷ ಮಹೇಶ್ ಠಾಕೂರು, ಜಿಲ್ಲಾ ಉಪಾಧ್ಯಕ್ಷರಾದ ಯಶ್ಪಾಲ್ ಸುವರ್ಣ, ರವಿ ಅಮೀನ್, ಪ್ರಧಾನ ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ ಉಪಸ್ಥಿತ ರಿದ್ದರು. ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕೆ ಸ್ವಾಗತಿಸಿದರು. ಅಶೋಕ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News