ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

Update: 2020-09-28 15:50 GMT

ಬೆಂಗಳೂರು, ಸೆ. 28: ರಾಜ್ಯ ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಮೈಸೂರಿನ ನೂತನ ಜಿಲ್ಲಾಧಿಕಾರಿಯನ್ನಾಗಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ನಿಯೋಜನೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿಗಳನ್ನು ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ಕೂಡಲೇ ನಿಯೋಜನೆಗೊಳ್ಳುವಂತೆ ಆದೇಶ ಹೊರಡಿಸಿದ್ದು, ರಾಜೇಂದ್ರ ಚೋಳನ್ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

ಜೆ.ಮಂಜುನಾಥ್-ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ, ಹೆಪ್ಸಿಬಾ ರಾಣಿ ಕೊರ್ಲಪತಿ-ಬಿಬಿಎಂಪಿಯ ಆಸ್ತಿ ವಿಭಾಗದ ವಿಶೇಷ ಆಯುಕ್ತೆ, ಎಂ.ಆರ್.ರವಿ ಕುಮಾರ್- ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಓ) ಹಾಗೂ ಪಿ ಶಿವಶಂಕರ್ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿಇಓ)ಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News