ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಅರ್ಜಿ ಆಹ್ವಾನ

Update: 2020-09-28 16:28 GMT

ಮಂಗಳೂರು, ಸೆ.28: ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಸಮಿತಿಗೆ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್) ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿಂದ ಪ್ರತಿನಿಧಿಗಳನ್ನು ನಾಮನಿರ್ದೇಶನ ಮಾಡಲು ಉದ್ದೇಶಿಸಲಾಗಿದೆ.

ಆಸಕ್ತ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ವ್ಯಕ್ತಿಗಳು ತಮ್ಮ ಭಾವಚಿತ್ರವಿರುವ ವೈಯಕ್ತಿಕ ವಿವರಗಳನ್ನು ಕಚೇರಿಯ ಇ ಮೇಲ್ ವಿಳಾಸ ಗೆ ಅಕ್ಟೋಬರ್ 6 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ, ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, dkminorityofficer@gmail.com ಮಂಗಳೂರು. ದೂ.ಸಂ.: 0824-2211078ನ್ನು ಸಂಪರ್ಕಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News