ಅಸ್ಸಾಂನ ಏಕೈಕ ಮಹಿಳಾ ಮುಖ್ಯಮಂತ್ರಿ ಸೈಯದಾ ಅನ್ವರಾ ತೈಮೂರ್ ನಿಧನ

Update: 2020-09-28 16:44 GMT

ಹೊಸದಿಲ್ಲಿ: ಅಸ್ಸಾಂನ ಏಕೈಕ ಮಹಿಳಾ ಮುಖ್ಯಮಂತ್ರಿ ಸೈಯದಾ ಅನ್ವರಾ ತೈಮೂರ್ (84) ಇಂದು ಆಸ್ಟ್ರೇಲಿಯಾದಲ್ಲಿ ನಿಧನರಾಗಿದ್ದಾರೆ.

ಕಾಂಗ್ರೆಸ್ ನ ನಾಯಕಿಯಾಗಿದ್ದ ಸೈಯದಾ 1980ರಲ್ಲಿ ಅಸ್ಸಾಂನ ಮುಖ್ಯಮಂತ್ರಿಯಾದರು. 1972, 1978, 1983, 1991ರಲ್ಲಿ ಅವರು ಶಾಸಕಿಯಾಗಿ ಆಯ್ಕೆಯಾಗಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಸೈಯದಾ ತೈಮೂರ್ ಜಿ ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಅಸ್ಸಾಂನ ಅಭಿವೃದ್ಧಿಗೆ ಅವರ ಕೊಡುಗೆಗಳು ನೆನಪಿನಲ್ಲಿ ಉಳಿಯುವಂತಹದ್ದು. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News