ಮಾಜಿ ಶಾಸಕ ಕಳಲೆ ಕೇಶವಮೂರ್ತಿಗೆ ಕೊರೋನ ಸೋಂಕು ದೃಢ

Update: 2020-09-28 16:57 GMT

ಮೈಸೂರು,ಸೆ.28: ನಂಜನಗೂಡು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದಿದೆ. ತಮ್ಮನ್ನು ಭೇಟಿ ಮಾಡಲು 15 ದಿನಗಳ ಕಾಲ ಯಾರೂ ಬರಬಾರದು ಎಂದು ಮಾಜಿ ಶಾಸಕರು ಮನವಿ ಮಾಡಿದ್ದಾರೆ. ಅಲ್ಲದೇ, ಇತ್ತೀಚೆಗೆ ತಮ್ಮ ಸಂಪರ್ಕದಲಿದ್ದವರು ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News