ರಾಜ್ಯ ರಾಜಧಾನಿಯಲ್ಲಿ 2,722 ಕೊರೋನ ಪ್ರಕರಣಗಳು ದೃಢ: 9 ಮಂದಿ ಮೃತ್ಯು

Update: 2020-09-28 17:09 GMT

ಬೆಂಗಳೂರು, ಸೆ.28: ನಗರದಲ್ಲಿ ಸೋಮವಾರ ಒಂದೆ ದಿನ 2,722 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 2,805 ಸೋಂಕಿತರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದು, 9 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 2,23,569 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 2,845 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,76,541 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 44,182 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 2,72,150 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ರವಿವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ಸಿಟಿಯಲ್ಲಿ ಒಟ್ಟು ಸಕ್ರಿಯ 16 ಕಂಟೈನ್ಮೆಂಟ್ ಝೋನ್‍ಗಳಿವೆ. ನಗರದ 5,99,878 ಜನರನ್ನು ಪ್ರಾಥಮಿಕ ಸಂಪರ್ಕಿರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 7,28,208 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 16,03,561 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.13.77ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.28ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.78.67ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News