ನೂತನ ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿರೋಧಿಸಿ ಪ್ರತಿಭಟನೆ

Update: 2020-09-28 18:03 GMT

ಮೈಸೂರು, ಸೆ.28: ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ ವಿರೋಧಿಸಿ ಮೈಸೂರು ನಾಗರೀಕ ವೇದಿಕೆ ವತಿಯಿಂದ ರಾತ್ರಿಯೇ ಪ್ರತಿಭಟನೆ ನಡೆಸಲಾಯಿತು.

ನಗರದ ನ್ಯಾಯಾಲಯದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ ನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾಧಿಕಾರಿಯಾಗಿ ಶರತ್ ಅವರನ್ನು ನೇಮಕ ಮಾಡಿ ಒಂದು ತಿಂಗಳು ಕಳೆದಿದೆ. ಕೊರೋನ ನಿಯಂತ್ರಣ ಮತ್ತು ಮೈಸೂರು ದಸರಾ ಚಟುವಟಿಕೆಗಳಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದ ಶರತ್ ಬಿ. ಅವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದು ಅತ್ಯಂತ ಖಂಡನೀಯ ಎಂದರು. ಕೆಲವು ರಾಜಕೀಯ ಒತ್ತಡಗಳಿಗೆ ಮಣಿದು ರೋಹಿಣಿ ಸಿಂಧೂರಿಯವರನ್ನು ನೇಮಕ ಮಾಡಿ ಆದೇಶ ಹೊರಡಿಸಿರುವುದು ದುರದೃಷ್ಟಕರ ಎಂದರು.

ರಾಜ್ಯ ಸರ್ಕಾರ ಕೂಡಲೇ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ ಶರತ್.ಬಿ ಅವರನ್ನು ಮುಂದುವರಿಸುವಂತೆ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News