ಸದ್ಯಕ್ಕೆ ಶಾಲೆ-ಕಾಲೇಜು ಪ್ರಾರಂಭಿಸುವ ಯೋಚನೆ ಸರ್ಕಾರದ ಮುಂದೆ ಇಲ್ಲ : ಸಚಿವ ಸುರೇಶ್ ಕುಮಾರ್

Update: 2020-09-29 05:43 GMT

ಬೆಂಗಳೂರು : ಶಾಲೆ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು‌ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News