ಬೆಳ್ತಂಗಡಿ: ವೃತ್ತಿ ತರಬೇತಿ, ಸವಲತ್ತುಗಳ ಮಾಹಿತಿ ಕಾರ್ಯಾಗಾರ

Update: 2020-09-29 11:25 GMT

ಬೆಳ್ತಂಗಡಿ: ಅನುಗ್ರಹ ಟ್ರೈನಿಂಗ್ ಕಾಲೇಜು ಬೆಳ್ತಂಗಡಿ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ಮತ್ತು ಸರಕಾರಿ ಸವಲತ್ತುಗಳ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ಅನುಗ್ರಹ ಕಾನ್ಫರೆನ್ಸ್ ಹಾಲ್ ನಲ್ಲಿ ನಡೆಯಿತು. ಅನುಗ್ರಹ ಕಾಲೇಜಿನ ನೂತನ ಪ್ರಾಂಶುಪಾಲ ಮಾಜಿ ಸೈನಿಕ ಮುಹಮ್ಮದ್ ರಫೀ ಅಧ್ಯಕ್ಷತೆ ವಹಿಸಿದ್ದರು.

ಇನ್ಫೋಮೇಟ್ ಫೌಂಡೇಶನ್ ನಿರ್ದೇಶಕ ಮತ್ತು ತರಬೇತುದಾರ ಅಬ್ದುಲ್ ಖಾದರ್ ನಾವೂರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳ ವಿದ್ಯಾರ್ಹತೆಗೆ ತಕ್ಕಂತೆ ಸಿಗಬಹುದಾದ ಸರಕಾರಿ ಮತ್ತು ಖಾಸಗಿ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ವಿವಿಧ ಇಲಾಖೆಗಳಿಂದ ಸಿಗುವ ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಮುಹಮ್ಮದ್ ರಫಿ ತರಬೇತುದಾರರಾದ ಅಬ್ದುಲ್ ಖಾದರ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಅನುಗ್ರಹ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಇರ್ಷಾದ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News