ವಕೀಲನ ಮನೆಯಲ್ಲಿ ಕಳವು ಪ್ರಕರಣ: ಇಬ್ಬರ ಬಂಧನ

Update: 2020-09-29 12:11 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.29: ವಕೀಲರೊಬ್ಬರ ಮನೆಯಲ್ಲಿ ನಗದು, ಚಿನ್ನಾಭರಣ ಕಳವು ಮಾಡಿರುವ ಆರೋಪ ಸಂಬಂಧ ಇಬ್ಬರನ್ನು ಇಲ್ಲಿನ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ನಿವಾಸಿ ಜಯಂತ್, ಉಮೇಶ್ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ನೆಲಮಂಗಲದ ಸುಭಾಷ್ ನಗರದ ವಕೀಲ ಹನುಮಂತರಾಯಪ್ಪ ಅವರು ಕಳೆದ ಸೆ. 11ರಂದು ಸ್ವಗ್ರಾಮಕ್ಕೆ ಕುಟುಂಬ ಸಮೇತ ಹೋಗಿದ್ದು, ಇದನ್ನು ಗಮನಿಸಿ ಹೊಂಚುಹಾಕಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ನೆಲಮಂಗಲ ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಆಧರಿಸಿ, ಆರೋಪಿಗಳ ಚಲನವಲನಗಳನ್ನು ಗಮನಿಸಿ ಅನುಮಾನದ ಮೇಲೆ ಜಯಂತ್‍ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಜಯಂತ್ ತನ್ನ ಸ್ನೇಹಿತ ಉಮೇಶನೊಂದಿಗೆ ಸೇರಿಕೊಂಡು ಕಳವು ಮಾಡಿರುವುದಾಗಿ ಬಾಯಿ ಬಿಟ್ಟಿದ್ದಾನೆ.

ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಜಯಂತ್ ನೆಲಮಂಗಲ ನಗರ, ನೆಲಮಂಗಲ ಗ್ರಾಮಾಂತರ, ಡಾಬಸ್‍ಪೇಟೆ ಹಾಗೂ ತುಮಕೂರಿನ ಕೆಲ ಠಾಣೆಗಳು ಸೇರಿದಂತೆ 9ಕ್ಕೂ ಹೆಚ್ಚು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News