ಬೈರ್‌ಸ್ಟೋ ಅರ್ಧಶತಕ: ಡೆಲ್ಲಿ ಕ್ಯಾಪಿಟಲ್ಸ್ ಗೆ 163 ರನ್ ಗುರಿ ನೀಡಿದ ಸನ್ ರೈಸರ್ಸ್ ಹೈದರಾಬಾದ್

Update: 2020-09-29 17:43 GMT

ದುಬೈ: ಆರಂಭಿಕ ಆಟಗಾರ ಜಾನಿ ಬೈರ್‌ಸ್ಟೋ ಬಾರಿಸಿದ ಅರ್ಧಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಉತ್ತಮ ಮೊತ್ತ ದಾಖಲಿಸಿದ್ದು, ಗೆಲುವಿಗೆ 163 ರನ್ ಗಳ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡವು ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಆರಂಭಿಕ ಆಟಗಾರ ಜಾನಿ ಬೈರ್ ಸ್ಟೋ 53 ರನ್ ಬಾರಿಸಿದರು. ಡೇವಿಡ್ ವಾರ್ನರ್ 45 ಮತ್ತು ಕೇನ್ ವಿಲಿಯಮ್ಸನ್ 41 ರನ್ ಸಿಡಿಸಿ ತಂಡಕ್ಕೆ ನೆರವಾದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಅಮಿತ್ ಮಿಶ್ರಾ ಹಾಗೂ ಕಾಗಿಸೋ ರಬಾಡ ತಲಾ 2 ವಿಕೆಟ್ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News