ಮೋಟಾರು ವಾಹನ ತೆರಿಗೆ ಇಳಿಕೆ: ಸಾರಿಗೆ ಸಚಿವ ಸವದಿ

Update: 2020-09-29 16:30 GMT

ಬೆಂಗಳೂರು, ಸೆ.29: ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಅಧಿನಿಯಮ 1957 (ಕರ್ನಾಟಕ ಕಾಯ್ದೆ 35/1957) ಕಲಂ 16(1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿನ 13 ರಿಂದ 20 ಆಸನ ಸಾಮರ್ಥ್ಯವುಳ್ಳ ಒಪ್ಪಂದ ವಾಹನಗಳಿಗೆ ಪ್ರತಿ ಆಸನಕ್ಕೆ ನಿಗದಿಪಡಿಸಿರುವ 900 ರೂ. ಗಳ ಮೋಟಾರು ವಾಹನ ತೆರಿಗೆಯನ್ನು 700 ರೂ. ಗಳಿಗೆ ಇಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಮೋಟಾರು ವಾಹನಗಳ ತೆರಿಗೆಯನ್ನು ಇಳಿಸಬೇಕೆಂದು ಹಲವಾರು ವಾಹನ ಮಾಲಕರು, ವಿವಿಧ ಸಂಘಟನೆಗಳು ಸಲ್ಲಿಸಿದ್ದ ಬೇಡಿಕೆಗೆ ಸ್ಪಂದಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಲಕ್ಷ್ಮಣ ಸವದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News