ರಾಜ್ಯ ರಾಜಧಾನಿಯಲ್ಲಿ ವ್ಯಾಪಕ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

Update: 2020-09-29 16:56 GMT

ಬೆಂಗಳೂರು, ಸೆ.29: ನಗರದ ಹಲವು ಕಡೆಗಳಲ್ಲಿ ಮಂಗಳವಾರದಂದು ಭಾರೀ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಮಂಗಳವಾರ ಬೆಳಗ್ಗೆಯಿಂದಲೂ ನಗರಾದ್ಯಂತ ಮೋಡ ಕವಿದ ವಾತಾವರಣ ಕಂಡು ಬಂತು. ನಂತರ ಮಧ್ಯಾಹ್ನದ ಹೊತ್ತಿಗೆ ಬಹುತೇಕ ಬಡಾವಣೆಗಳಲ್ಲಿ ಹೆಚ್ಚು ಮಳೆ ಸುರಿದಿದ್ದು, ಕೆಲ ರಸ್ತೆಗಳಲ್ಲಿ ಚರಂಡಿ ನೀರು ಉಕ್ಕಿ ಹರಿಯಿತು.

ನಗರದ ವಿಧಾನಸೌಧ, ಮೆಜೆಸ್ಟಿಕ್, ಶೇಷಾದ್ರಿಪುರ, ಓಕಳಿಪುರಂ, ವಿಜಯನಗರ, ಹಂಪಿನಗರ, ರಾಜಾಜಿನಗರ, ಯಶವಂತಪುರ, ಚಾಮರಾಜಪೇಟೆ, ನಾಯಂಡಹಳ್ಳಿ, ಜಯನಗರ ಸೇರಿದಂತೆ ಬಹುತೇಕ ಬಡಾವಣೆಗಳಲ್ಲಿ ಮಳೆ ಸುರಿದಿದೆ.

ಅಲ್ಲದೇ ಆಗಾಗ ಬರುತ್ತಿದ್ದ ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡಿದರು. ಮಳೆಯಿಂದಾಗಿ ರಸ್ತೆ ಬದಿ ಅಂಗಡಿಗಳಲ್ಲಿ ಗ್ರಾಹಕರು ಕಂಡು ಬರಲಿಲ್ಲ. ನಗರದಲ್ಲಿ ಮಂಗಳವಾರ ಸರಾಸರಿ 5.40 ಮಿಮಿ ಮಳೆ ಸುರಿದಿದ್ದು, ಕೆಲವಡೆ ತುಂತುರು ಮಳೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News