ಶಿಕ್ಷಕರು ವೇತನವಿಲ್ಲದೆ ವೃತ್ತಿಯನ್ನೇ ತೊರೆಯುತ್ತಿದ್ದಾರೆ: ಎ.ಪಿ.ರಂಗನಾಥ್

Update: 2020-09-29 16:57 GMT

ಬೆಂಗಳೂರು, ಸೆ.29: ಲಾಕ್‍ಡೌನ್ ಸಂಕಷ್ಟದಿಂದ ಅನುದಾನರಹಿತ ಖಾಸಗಿ ಶಾಲೆಗಳ ಶಿಕ್ಷಕರು ವೇತನವಿಲ್ಲದೆ ತಮ್ಮ ವೃತ್ತಿಯನ್ನೇ ತೊರೆಯುತ್ತಿದ್ದಾರೆ ಎಂದು ಟೀಚರ್ಸ್ ಅಂಡ್ ಮ್ಯಾನೇಜ್‍ಮೆಂಟ್ ಫೋರಂ ಅಧ್ಯಕ್ಷ ಎ.ಪಿ.ರಂಗನಾಥ್ ಬೇಸರ ವ್ಯಕ್ತಪಡಿಸಿದರು.

ಮಂಗಳವಾರ ನಗರದ ಬ್ಯಾಟರಾಯನಪುರದಲ್ಲಿ ಟೀಚರ್ಸ್ ಅಂಡ್ ಮ್ಯಾನೇಜ್‍ಮೆಂಟ್ ಫೋರಂ ಕರ್ನಾಟಕ ವತಿಯಿಂದ ಆಯೋಜಿಸಿದ್ದ ‘ಶಿಕ್ಷಕರ ಸ್ನೇಹಸಮ್ಮಿಲನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್-19ನಿಂದ ಸಂಕಷ್ಟದಲ್ಲಿರುವ ಕೆಲ ವರ್ಗಗಳಿಗೆ ಆರ್ಥಿಕ ಪ್ಯಾಕೇಜ್ ನೀಡಲಾಗಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಶಿಕ್ಷಕ ಸಮುದಾಯವನ್ನು ನಿರ್ಲಕ್ಷಿ ಸಿರುವುದರಿಂದ ಅವರ ಬದುಕು ದುಸ್ತರವಾಗಿದೆ. ಈ ದಿಸೆಯಲ್ಲಿ ಎಲ್ಲ ವರ್ಗಗಳಿಗೆ ನೀಡಿದಂತೆ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದರು.

ಕಳೆದ ವರ್ಷದ ಬೋಧನಾ ಶುಲ್ಕ, ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರವೇಶಾತಿ ವಿಳಂಬದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಿಕ್ಷಣಸಂಸ್ಥೆಗಳ ಆಡಳಿತ ಮಂಡಳಿಗೆ ಸರಕಾರ ನೀಡಬೇಕಾಗಿರುವ ಆರ್.ಟಿ.ಇ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ 13 ಮಂದಿ ಪ್ರೌಢಶಾಲಾ ನಿವೃತ್ತ ಮುಖ್ಯಶಿಕ್ಷಕರು ಹಾಗೂ ಸಹಶಿಕ್ಷಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಟೀಚರ್ಸ್ ಅಂಡ್ ಮ್ಯಾನೇಜ್‍ಮೆಂಟ್ ಫೋರಂನ ಪ್ರಧಾನ ಕಾರ್ಯದರ್ಶಿ ಎಸ್.ಸುರೇಶ್, ಜಂಟಿ ಕಾರ್ಯದರ್ಶಿ ನರಸೇಗೌಡ, ಬೆಂಗಳೂರು ಉತ್ತರ ಜಿಲ್ಲೆ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಕಾರ್ಯದರ್ಶಿ ವಿ.ಸುರೇಶ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News