ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನ ಟೆಸ್ಟ್ ಕಡ್ಡಾಯಗೊಳಿಸಲು ಶೀಘ್ರವೇ ಅಧಿಸೂಚನೆ: ಮಂಜುನಾಥ್ ಪ್ರಸಾದ್

Update: 2020-09-29 17:02 GMT

ಬೆಂಗಳೂರು, ಸೆ.29: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಕೊರೋನ ಪರೀಕ್ಷೆ ಮಾಡಿಸಲು ಶೀಘ್ರವೇ ಅಧಿಸೂಚನೆ ಹೊರಡಿಸಲಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಕೊರೋನ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆ ಬಿಬಿಎಂಪಿ ಆರೋಗ್ಯ ಸಿಬ್ಬಂದಿಗಳು ರ‍್ಯಾಪಿಡ್ ಟೆಸ್ಟ್ ಕೈಗೊಂಡಿದ್ದಾರೆ. ವಾರ್ಡ್ ಗಳಿಗೆ ಭೇಟಿ ನೀಡಿ ಕೊರೋನ ಪರೀಕ್ಷೆ ಮಾಡಿಸುತ್ತಿದ್ದಾರೆ. ಕೊರೋನ ಪರೀಕ್ಷೆಗೆ ನಿರಾಕರಣೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಕೊರೋನ ಪರೀಕ್ಷೆ ಅಂದರೆ ವಾರ್ಡ್ ನ ಜನ ಕಂಟಕವೆಂದು ಭಾವಿಸಿ, ನಮಗೆ ಕೊರೋನ ಇಲ್ಲ, ಪರೀಕ್ಷೆ ಮಾಡಿಸಲ್ಲ ಎಂದು ಅಧಿಕಾರಿಗಳಿಗೆ ಉತ್ತರಿಸಿ ಕೊರೋನ ಪರೀಕ್ಷೆಗೆ ನಿರಾಕರಿಸುತ್ತಿದ್ದಾರೆ. ಹೀಗಾಗಿ ಕೊರೋನ ಸೋಂಕು ಮತ್ತಷ್ಟು ಹೆಚ್ಚುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನ ಸೋಂಕಿತರ ಜತೆ ಪ್ರಾಥಮಿಕ, ದ್ವಿತೀಯ ಸಂಪರ್ಕವಿದ್ದರೂ ಕೊರೋನ ಪರೀಕ್ಷೆಗೆ ನಿರಾಕರಣೆ ಮಾಡುತ್ತಿದ್ದಾರೆ. ಇನ್ನು ಮುಂದೆ ಕೊರೋನ ಪರೀಕ್ಷೆಗೆ ಒಪ್ಪದ ಸಾರ್ವಜನಿಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News