ಶಾಸಕ ಎಂ.ಪಿ.ರೇಣುಕಾಚಾರ್ಯಗೆ ಕೊರೋನ ಸೋಂಕು ದೃಢ

Update: 2020-09-29 17:32 GMT

ಬೆಂಗಳೂರು, ಸೆ.29: ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯಗೆ ಕೊರೋನ ವೈರಸ್ ಸೋಂಕು ಮಂಗಳವಾರ ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಕಾರಣ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಮಾಡಿಸಿದ ಕೋವಿಡ್ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೋನ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ’ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News