ಮಿಂಚಿದ ರಶೀದ್ ಖಾನ್: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೈದರಾಬಾದ್ ಜಯಭೇರಿ

Update: 2020-09-29 17:58 GMT

ದುಬೈ, ಸೆ.29: ಬೌಲರ್ ಗಳು ನೀಡಿದ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್ ಗಳಿಂದ ಗೆದ್ದಿದ್ದು, ಟೂರ್ನಿಯಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ. ಮೊದಲೆರಡು ಪಂದ್ಯಗಳನ್ನು ಗೆದ್ದಿದ್ದ ಡೆಲ್ಲಿ ತಂಡವು ಮೂರನೇ ಪಂದ್ಯದಲ್ಲಿ ಸೋತಿದೆ.

ಗೆಲುವಿಗೆ 163 ರನ್ ಗಳ ಗುರಿ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಶಿಖರ್ ಧವನ್ 34, ರಿಷಬ್ ಪಂತ್ 28, ಹೆಟ್ಮೈರ್ 21 ರನ್ ಗಳಿಸಿದರು. ಹೈದರಾಬಾದ್ ಪರ ರಶೀದ್ ಖಾನ್ 14 ರನ್ ಗೆ 3 ವಿಕೆಟ್ ಕಿತ್ತು ಮಿಂಚಿದರು. ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡವು ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತ್ತು. ಆರಂಭಿಕ ಆಟಗಾರ ಜಾನಿ ಬೈರ್ ಸ್ಟೋ 53 ರನ್ ಬಾರಿಸಿದರು. ಡೇವಿಡ್ ವಾರ್ನರ್ 45 ಮತ್ತು ಕೇನ್ ವಿಲಿಯಮ್ಸನ್ 41 ರನ್ ಸಿಡಿಸಿ ತಂಡಕ್ಕೆ ನೆರವಾದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಅಮಿತ್ ಮಿಶ್ರಾ ಹಾಗೂ ಕಾಗಿಸೋ ರಬಾಡ ತಲಾ 2 ವಿಕೆಟ್ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News