ವಡೋದರಾ:ಕಟ್ಟಡ ಕುಸಿದು ಮೂವರು ಕಾರ್ಮಿಕರ ಸಾವು

Update: 2020-09-29 18:03 GMT

 ಅಹ್ಮದಾಬಾದ್,ಸೆ.29: ಗುಜರಾತಿನ ವಡೋದರಾ ನಗರದ ಜನನಿಬಿಡ ಬವಮಾನಪುರ ಪ್ರದೇಶದಲ್ಲಿ ಮಂಗಳವಾರ ನಸುಕಿನ 12:30ರ ಸುಮಾರಿಗೆ ನಿರ್ಮಾಣ ಹಂತದ ಮೂರಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಮೂವರು ಕಾರ್ಮಿಕರು ಮೃತಪಟ್ಟಿದ್ದು,ಇನ್ನೋರ್ವ ಕಾರ್ಮಿಕ ಗಾಯಗೊಂಡಿದ್ದಾನೆ.

ಕಟ್ಟಡ ಕುಸಿದ ಮಾಹಿತಿ ಲಭಿಸಿದ ಬಳಿಕ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮಧ್ಯಾಹ್ನದ ವೇಳೆಗೆ ಅವಶೇಷಗಳಡಿಯಿಂದ ಮೂರು ಶವಗಳನ್ನು ಮತ್ತು ಗಾಯಾಳುವನ್ನು ಹೊರಕ್ಕೆ ತೆಗೆಯುವಲ್ಲಿ ಸಫಲರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News