ತಗಡಿನ ಶೆಡ್‍ಗಳಲ್ಲಿ ಶಾಲೆಗಳು ನಡೆಸುವುದು ಸಲ್ಲ: ಸಚಿವ ಸುರೇಶ್ ಕುಮಾರ್

Update: 2020-09-29 18:23 GMT

ಬೀದರ್, ಸೆ.29: ಜಿಲ್ಲೆಯಲ್ಲಿ ತಗಡಿನ ಶೆಡ್‍ಗಳಲ್ಲಿ ಅನೇಕ ಶಾಲೆಗಳು ನಡೆಯುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತ್ವರಿತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೀದರ್ ತಾಲೂಕಿನ ಯಾಕತಪುರ ಗ್ರಾಮದ ಇನ್ಫಂಟ್ ಜೀಸಸ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ಭೇಟಿ ನೀಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು. ಒಂದು ತಿಂಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪ್ರತಿ ತಾಲೂಕಿನಲ್ಲಿ ಟಿನ್ ಶೆಡ್‍ಗಳಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಇಲ್ಲದ ಶಾಲೆಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಿ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.

ಹೊಸ ಶಾಲೆಗೆ ಪರವಾನಗಿ ಕೊಡುವಾಗ ಎಲ್ಲ ರೀತಿಯ ಸೌಕರ್ಯಗಳು ಇವೆಯೇ ಎನ್ನುವುದನ್ನು ಪರಿಶೀಲಿಸುವುದು ಅಧಿಕಾರಿಗಳ ಕರ್ತವ್ಯ. ಟಿನ್ ಶೆಡ್‍ಗಳಲ್ಲಿ ಇರುವ ಶಾಲೆಗಳಿಗೆ ಹಿಂದೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಕಟ್ಟಡ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಹೊಂದಿದರಷ್ಟೇ ಶಾಲೆಗೆ ಅನುಮತಿ ಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News