ಕೊರೋನ ನೆಗೆಟಿವ್: ದಿಲ್ಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಸ್ಪತ್ರೆಯಿಂದ ಬಿಡುಗಡೆ

Update: 2020-09-29 18:28 GMT

ಹೊಸದಿಲ್ಲಿ, ಸೆ.29: ಡೆಂಗಿ ಜ್ವರದಿಂದ ಕಳೆದ ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದ ದಿಲ್ಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾರ ಕೊರೋನ ಸೋಂಕು ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ.

 ಡೆಂಗಿಯಿಂದ ಚೇತರಿಸಿಕೊಂಡಿರುವ ಸಿಸೋಡಿಯಾರನ್ನು ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಈ ಮಧ್ಯೆ, ಮಂಗಳವಾರ ಬೆಳಗ್ಗಿನವರೆಗಿನ 24 ಗಂಟೆಯ ಅವಧಿಯಲ್ಲಿ ದಿಲ್ಲಿಯಲ್ಲಿ 1,984 ಹೊಸ ಕೊರೋನ ಸೋಂಕು ಪ್ರಕರಣ ದಾಖಲಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 2.73 ಲಕ್ಷ ದಾಟಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,272ಕ್ಕೇರಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News