ಮಂಗಳೂರು: ಬ್ಯಾಂಕ್ ಆಫ್ ಬರೋಡದಲ್ಲಿ ಬೆಂಕಿ‌ ಅನಾಹುತ

Update: 2020-09-30 03:49 GMT

ಮಂಗಳೂರು, ಸೆ. 30: ನಗರದ ಬಲ್ಮಠದಲ್ಲಿರುವ ಬ್ಯಾಂಕ್ ಆಫ್ ಬರೋಡದ ಶಾಖಾ ಕಚೇರಿಯಲ್ಲಿ ಇಂದು ಮುಂಜಾನೆ ಬೆಂಕಿ‌ ಅನಾಹುತ ಸಂಭವಿಸಿದೆ.

ಮುಂಜಾನೆ ‌5:30ರಿಂದ 6 ಗಂಟೆಯ‌ ಮಧ್ಯೆ‌ ಈ ಅನಾಹುತ ಸಂಭವಿಸಿದೆ ಎನ್ನಲಾಗುತ್ತಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ‌ ಅನಾಹುತ ನಡೆದಿದೆ ಎಂದು ಹೇಳಲಾಗುತ್ತಿದೆ. ದುರಂತದ ಬಗ್ಗೆ ‌ಬ್ಯಾಂಕ್ ಅಧಿಕಾರಿಗಳು ಮತ್ತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಗ್ನಿಶಾಮಕ  ದಳದ ಸಿಬ್ಬಂದಿ ವರ್ಗ‌ ಹೆಚ್ಚಿನ‌ ಅನಾಹುತ‌ ತಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News