ಅ.1ರಂದು ರೆಡ್‍ಕ್ರಾಸ್ ನಿಂದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ

Update: 2020-09-30 12:20 GMT

ಬೆಂಗಳೂರು, ಸೆ.30: ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ಅ.1ರಂದು ಬೆಳಗ್ಗೆ 11ಕ್ಕೆ ನಗರದ ರೆಡ್‍ಕ್ರಾಸ್ ಭವನದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್‍ ಕುಮಾರ್ ಪಾಂಡೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗಾಂಧಿ ಭವನದ ಅಧ್ಯಕ್ಷ ವೂಡೇ ಪಿ.ಕೃಷ್ಣ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಗೋಪಾಲ್ ಹೊಸೂರ್ ಭಾಗವಹಿಸಲಿದ್ದಾರೆ. ಹಾಗೂ ಅಧ್ಯಕ್ಷತೆಯನ್ನು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಎಸ್.ನಾಗಣ್ಣ ವಹಿಸಲಿದ್ದಾರೆ.

ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯು ವಾರ್ಷಿಕವಾಗಿ ಸುಮಾರು 500ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿದ್ದು, 35 ಸಾವಿರಕ್ಕೂ ಹೆಚ್ಚು ರಕ್ತದ ಯೂನಿಟ್‍ಗಳನ್ನು ಸಂಗ್ರಹಿಸುತ್ತಿದೆ. ಪ್ರತಿಯೊಬ್ಬರಿಗೆ ರಕ್ತದ ಅಗತ್ಯತೆ ಹಾಗೂ ಮಹತ್ವದ ಬಗ್ಗೆ ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಅ.1ರಂದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಆಚರಿಸಲಾಗುತ್ತಿದೆ.

ಪ್ರಸ್ತುತ ಇಡೀ ವಿಶ್ವವೇ ಕೊರೋನ ಸೋಂಕಿನಿಂದ ಬಳಲುತ್ತಿದ್ದು, ರಕ್ತದಾನ ಶಿಬಿರಗಳು ನಡೆಯುತ್ತಿಲ್ಲ. ಇದರಿಂದಾಗಿ ವಿವಿಧ ರೋಗಗಳಿಂದ ಬಳಲುತ್ತಿರುವವರಿಗೆ ರಕ್ತದ ಕೊರತೆ ಉಂಟಾಗಿದೆ. ಇಂತಹ ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ಆತಂಕವಿಲ್ಲದೆ ರಕ್ತದಾನ ಮಾಡುವಂತೆ ಪ್ರೇರೇಪಿಸಬೇಕಾದ ಅಗತ್ಯವಿದೆ ಎಂದು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಗೋಪಾಲ್ ಹೊಸೂರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News