ಮೈಸೂರು ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ ವಿಚಾರ: ರಾಜ್ಯ ಸರಕಾರಕ್ಕೆ ಸಿಎಟಿ ಕೋರ್ಟ್ ನೋಟಿಸ್
Update: 2020-09-30 19:59 IST
ಬೆಂಗಳೂರು, ಸೆ.30: ರೋಹಿಣಿ ಸಿಂಧೂರಿಯನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸಿಎಟಿ ಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಕೇವಲ 30 ದಿನಗಳಲ್ಲಿ ತನ್ನನ್ನು ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ಬಿ.ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಎಟಿ(ಕೇಂದ್ರೀಯ ಆಡಳಿತ ನ್ಯಾಯಮಂಡಳಿ) ನ್ಯಾಯಪೀಠ, ರಾಜ್ಯ ಸರಕಾರಕ್ಕೆ ಉತ್ತರಿಸುವಂತೆ ನೋಟಿಸ್ ಜಾರಿಗೊಳಿಸಿದೆ.
ಕಲಬುರಗಿ ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್ ಅವರು ಒಂದು ತಿಂಗಳ ಹಿಂದಷ್ಟೇ ಮೈಸೂರು ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. ಈ ನಡುವೆ ಶರತ್ ಅವರನ್ನು ಸರಕಾರ ದಿಢೀರ್ ವರ್ಗಾವಣೆಗೆ ಆದೇಶಿಸಿ, ಆ ಸ್ಥಳಕ್ಕೆ ಸಿಂಧೂರಿ ಅವರನ್ನು ನೇಮಕ ಮಾಡಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದರ ಮಧ್ಯೆಯೇ ಬಿ.ಶರತ್ ಕೋರ್ಟ್ ಮೆಟ್ಟಿಲೇರಿದ್ದಾರೆ.