ರಾಜ್ಯದಲ್ಲಿ ಅ.15ರವರೆಗೂ ಶಾಲಾ-ಕಾಲೇಜುಗಳ ಆರಂಭವಿಲ್ಲ: ಶಿಕ್ಷಣ ಇಲಾಖೆ

Update: 2020-09-30 14:42 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.30: ರಾಜ್ಯದಲ್ಲಿ ಕೊರೋನ ಸೋಂಕಿನ ಪ್ರಮಾಣ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಅ.15 ರವರೆಗೂ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳನ್ನು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದಿರಲು ತೀರ್ಮಾನಿಸಲಾಗಿದೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟನೆ ಹೊರಡಿಸಿದ್ದು, ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳನ್ನು ಆರಂಭ ಮಾಡುವ ಬಗ್ಗೆ ಆ.28 ರಂದು ಕೇಂದ್ರ ಸರಕಾರದ ಗೃಹ ಮಂತ್ರಾಲಯದ ಮಾರ್ಗಸೂಚಿಯಂತೆ ಕಂಟೈನ್ಮೆಂಟ್ ವಲಯ ಬಿಟ್ಟು 9 ರಿಂದ 12 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆಯನ್ನು ಸೆ.21 ರಿಂದ ಆರಂಭಿಸಲು ಅನುಮತಿ ನೀಡಲಾಗಿದೆ.

ಆದರೆ, ಕರ್ನಾಟಕದಲ್ಲಿ ಕೋವಿಡ್-19 ಹಬ್ಬುತ್ತಿರುವುದರಿಂದ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದಿರಲು ಸೆ.19 ರಂದು ಸೂಚಿಸಲಾಗಿತ್ತು. ಈ ಸಂಬಂಧ ವಿವರವಾಗಿ ಪರಿಶೀಲಿಸಿದ ಬಳಿಕ ರಾಜ್ಯದಲ್ಲಿ ಪ್ರಸ್ತುತ ಹಂತದಲ್ಲಿಯೂ ಕೊರೋನ ಪ್ರಮಾಣ ಕಡಿಮೆಯಾಗದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುವುದು ಕ್ಷೇಮಕರವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ. ಹೀಗಾಗಿ, ಅ.15 ರವರೆಗೂ ಶಾಲಾ-ಕಾಲೇಜುಗಳು ಆರಂಭಿಸಲಾಗುತ್ತಿಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News