ತೀರ್ಪು ಪ್ರಶ್ನಿಸಿ ಕೇಂದ್ರ, ಉ.ಪ್ರ ಸರಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು: ಝಮೀರ್ ಅಹ್ಮದ್

Update: 2020-09-30 14:43 GMT

ಬೆಂಗಳೂರು, ಸೆ.30: ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ಬಗ್ಗೆ ಶಾಸಕ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದು, ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರಕಾರ ಹಾಗೂ ಉತ್ತರ ಪ್ರದೇಶ ಸರಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, 2019ರಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ್ದು ಕಾನೂನು ಬಾಹಿರವೆಂದು ತಿಳಿಸಿತ್ತು. ಆದರೆ, ದುರಾದೃಷ್ಟವಶಾತ್ ಸಿಬಿಐ ವಿಶೇಷ ನ್ಯಾಯಾಲಯವು ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಮಗೆ ನಂಬಿಕೆಯಿದೆ. ಈ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರಕಾರ ಹಾಗೂ ಉತ್ತರ ಪ್ರದೇಶ ಸರಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News