ಅ. 2ರಿಂದ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಪ್ರವಾಸ

Update: 2020-09-30 15:04 GMT

ಮಂಗಳೂರು, ಸೆ.30: ರಾಜ್ಯ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅ.2ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಗ್ಗೆ 9:30ಕ್ಕೆ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, 10:30ಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನಿಂದ ಜೀವ ವೈವಿಧ್ಯ ಸಮಿತಿ ಆಯೋಜಿಸಿದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ ಗುತ್ತಿಗಾರು ಸಮೀಪದ ಮಡಪ್ಪಾಡಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.

ಅ.3ರಂದು ಬೆಳಗ್ಗೆ 8 ಗಂಟೆಗೆ ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ ನೀಡಿ, 10 ಗಂಟೆಗೆ ಸಿಸಿಎಫ್‌ಕಚೇರಿಯಲ್ಲಿ ಮಂಗಳೂರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೊತೆ ಅರಣ್ಯ ಸಂರಕ್ಷಣೆಯ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಅರಣ್ಯ, ಜೀವ ವೈವಿಧ್ಯ, ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ, ಕುಲಪತಿ, ರಿಜಿಸ್ಟ್ರಾರ್, ಸಸ್ಯಶಾಸ್ತ್ರ, ಜೀವಶಾಸ್ತ್ರ, ಎನ್‌ಎಸ್‌ಎಸ್ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ.

ಅ.4ರಂದು ಬೆಳಗ್ಗೆ 10 ಗಂಟೆಗೆ ಪುತ್ತೂರು ತಾಲೂಕಿನ ಉರುಂಜಿ ಕುಮಾರಧಾರ ನದಿ ಪೂಜೆಯಲ್ಲಿ ಪರಿಸರ ಸಮಿತಿಯ ಜೊತೆ ಪಾಲ್ಗೊಳ್ಳಲಿ ದ್ದಾರೆ. 11:30ಕ್ಕೆ ಗಂಟೆಗೆ ಕಡಬ ತಾಲೂಕು ಪಂಚಾಯತ್‌ನಲ್ಲಿ ಜೀವವೈವಿಧ್ಯ ಸಮಿತಿ ಸದಸ್ಯರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿಯ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News