ಬೆಂಗಳೂರು: ವಿಮಾನ ವಿಲ್ದಾಣದಲ್ಲಿ 20 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

Update: 2020-09-30 16:05 GMT

ಬೆಂಗಳೂರು, ಸೆ.30: ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದ ಕೊರಿಯರ್ ವಿಭಾಗದಲ್ಲಿದ್ದ 20 ಲಕ್ಷ ರೂ. ಮೌಲ್ಯದ 400 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಹೊರ ದೇಶದಿಂದ ಪಾರ್ಸಲ್ ಆಗಿ ಬಂದಿದ್ದ ಲೆದರ್ ಬ್ಯಾಗ್ ಬಗ್ಗೆ ಗುಮಾನಿ ವ್ಯಕ್ತವಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಕಾರಿಗಳು ಪರಿಶೀಲಿಸಿದಾಗ ಮಾದಕ ದ್ರವ್ಯ ಬೆಳಕಿಗೆ ಬಂದಿದೆ.

ಕೂಡಲೇ 400 ಗ್ರಾಂ ತೂಕದ ಎಂಡಿಎಂಎ ವಶಪಡಿಸಿಕೊಂಡು ಕಸ್ಟಮ್ಸ್ ಅಧಿಕಾರಿಗಳು ಮುಂದಿನ ಕ್ರಮ ಜರುಗಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News