ಕಿಶನ್ ಹೆಗ್ಡೆ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Update: 2020-09-30 16:32 GMT

ಉಡುಪಿ, ಸೆ.30: ಹಿರಿಯಡ್ಕ ಪೇಟೆಯಲ್ಲಿ ಸೆ.24ರಂದು ಹಾಡುಹಗಲೇ ನಡೆದ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಐವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದ್ದಾರೆ.

ಹೆಚ್ಚಿನ ತನಿಖೆಗಾಗಿ ಪ್ರಕರಣದ ತನಿಖಾಧಿಕಾರಿ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ನೇತೃತ್ವದಲ್ಲಿ ಬಂಧಿತರನ್ನು ಸೆ.26ರಂದು ಐದು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು. ಈ ಅವಧಿಯಲ್ಲಿ ಉಜಿರೆಯಲ್ಲಿ ಎಸೆಯಲಾದ ಕೃತ್ಯಕ್ಕೆ ಬಳಸಲಾದ ತಲವಾರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ ಎನ್ನಲಾಗಿದೆ.

ಇದೀಗ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಐವರ ಪೈಕಿ ಚೇತನ್ ಯಾನೆ ಚೇತು ಪಡೀಲ್, ರಮೇಶ್ ಪೂಜಾರಿ ಎಂಬವರನ್ನು ಪೊಲೀಸರು ನ್ಯಾಯಾ ಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳಿಗೆ 15ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಧಿಸಿದೆ. ಉಳಿದಂತೆ ಪ್ರಮುಖ ಆರೋಪಿ ಮನೋಜ್ ಕೋಡಿಕೆರೆ, ಚಿತ್ತರಂಜನ್ ಪೂಜಾರಿ, ದೀಕ್ಷಿತ್ ಶೆಟ್ಟಿ ಯಾನೆ ದೇವಿ ಪ್ರಸಾದ್ ಎಂಬವರ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅ.1ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News