ಉಡುಪಿ ಡಿಡಿಪಿಐ ಶೇಷಶಯನ ಕಾರಿಂಜ ನಿವೃತ್ತಿ

Update: 2020-09-30 16:42 GMT

ಉಡುಪಿ, ಸೆ.30: ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶೇಷಶಯನ ಕಾರಿಂಜ ವೃತ್ತಿಯಿಂದ ವಯೋನಿವೃತ್ತಿ ಹೊಂದಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ 1984ರಲ್ಲಿ ಬೈಂದೂರು ತಾಲೂಕಿನ ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ದಲ್ಲಿ ಸಹಶಿಕ್ಷಕರಾಗಿ ವೃತ್ತಿ ಜೀವನವನ್ನು ಆರಂಭಿಸಿದ ಇವರು, ನಂತರ ಮುಖ್ಯೋಪಾ ಧ್ಯಾಯರಾಗಿ, ಉಪನ್ಯಾಸಕರಾಗಿ, ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ಡಯಟ್ ಉಪನ್ಯಾಸಕರಾಗಿ, ಉಪನಿರ್ದೇಶಕರಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 36 ವರ್ಷಳ ಕಾಲ ಕರ್ತವ್ಯ ನಿರ್ವಹಿಸಿದ್ದರು.

ಉಪನಿರ್ದೇಶಕರಿಗೆ ಸನ್ಮಾನ:  ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬುಧವಾರ ವಯೋನಿವೃತ್ತಿ ಹೊಂದಿದ ಉಡುಪಿ ಜಿಲ್ಲಾ ಪಂಚಾ ಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ಶೇಷಶಯನ ಕಾರಿಂಜ ದಂಪತಿಯನ್ನು ಮಣಿಪಾಲ ರಜತಾದ್ರಿಯ ಇಲಾಾ ಕಾರ್ಯಾಲಯದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾಪು ತಾಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಶಿರ್ವ, ಬ್ರಹ್ಮಾವರ ತಾಲೂಕು ಅಧ್ಯಕ್ಷ ನಾರಾಯಣ ಮಡಿ, ಕುಂದಾಪುರ ತಾಲೂಕು ಅಧ್ಯಕ್ಷ ಡಾ.ಕಿಶೋರ್‌ಕುಮಾರ್ ಶೆಟ್ಟಿ, ಸಂಘ ಸಂಸ್ಥೆಗಳ ಪ್ರತಿನಿಧಿ ಭುವನಪ್ರಸಾದ್ ಹೆಗ್ಡೆ, ನೂತನ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ವೇದಮೂರ್ತಿ, ಶಿಕ್ಷಣಾಧಿ ಕಾರಿ ಅಶೋಕ್ ಕಾಮತ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News