ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್‌ಗೆ 12 ಲಕ್ಷರೂ. ದಂಡ

Update: 2020-09-30 18:34 GMT

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಿಧಾನಗತಿಯ ಬೌಲಿಂಗ್ ದರವನ್ನು ಕಾಯ್ದುಕೊಂಡಿದ್ದರಿಂದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ.

ಇದು ಈ ಋತುವಿನ ಅವರ ಮೊದಲ ಅಪರಾಧ ಎಂದು ಪರಿಗಣಿಸಿ, ಅಯ್ಯರ್‌ಗೆ ಐಪಿಎಲ್‌ನ ನೀತಿ ಸಂಹಿತೆಯಡಿ ಕನಿಷ್ಠ ಓವರ್-ರೇಟ್ ತಪ್ಪಿಗೆ ದಂಡ ವಿಧಿಸಲಾಗಿದೆ. ಸೆಪ್ಟಂಬರ್ 29, 2020ರಂದು ಅಬುಧಾಬಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ತಂಡವು ನಿಧಾನಗತಿಯ ಬೌಲಿಂಗ್ ದರವನ್ನು ಕಾಯ್ದುಕೊಂಡ ಕಾರಣಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್‌ಗೆ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಪ್ರಕಟನೆ ತಿಳಿಸಿದೆ.

    ಕಳೆದ ವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅವರಿಗೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಿಧಾನಗತಿಯ ಬೌಲಿಂಗ್ ದರವನ್ನು ಕಾಯ್ದುಕೊಂಡಿದ್ದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಮಂಗಳವಾರ ರಾತ್ರಿ ಶೇಖ್ ಝಾಹಿದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ತಂಡವು ಸನ್‌ರೈಸರ್ಸ್ ವಿರುದ್ಧ 15 ರನ್‌ಗಳ ಸೋಲು ಅನುಭವಿಸಿತ್ತು. ಅಯ್ಯರ್ ತಂಡವು 13ನೇ ಆವೃತ್ತಿಯಲ್ಲಿ ಮೊದಲ ಸೋಲನ್ನು ಅನುಭವಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News