ಯಾರಿಗೆ ಟಿಕೆಟ್ ಎಂದು ಹೇಳಲು ಸಾಧ್ಯವಿಲ್ಲ: ಸಚಿವ ಸೋಮಶೇಖರ್

Update: 2020-10-01 10:58 GMT

ಬೆಂಗಳೂರು, ಅ. 1: ರಾಜರಾಜೇಶ್ವರಿ ನಗರ(ಆರ್.ಆರ್.ನಗರ) ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಟಿಕೆಟ್‍ಗಾಗಿ ಆಕಾಂಕ್ಷಿಗಳೆಲ್ಲ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಕೋರ್ ಕಮಿಟಿಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‍ನಲ್ಲಿ ನಿರ್ಧಾರ ಆಗುವ ಮುನ್ನ ಯಾರಿಗೆ ಟಿಕೆಟ್ ಸಿಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಬಿಜೆಪಿ ಪಕ್ಷದಲ್ಲೊಂದು ವ್ಯವಸ್ಥೆ ಇದೆ. ಪಕ್ಷದ ಚೌಕಟ್ಟಿನಲ್ಲೇ ಎಲ್ಲವೂ ನಡೆಯುತ್ತದೆ. ಕೋರ್ ಕಮಿಟಿ ಕೇಂದ್ರ ಸಮಿತಿಗೆ ಆಕಾಂಕ್ಷಿಗಳ ಹೆಸರನ್ನು ಶಿಫಾರಸ್ಸು ಮಾಡಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ದೃಷ್ಟಿಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮುನಿರತ್ನ ಅವರು ಟಿಕೆಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಅದೇ ರೀತಿ ಇನ್ನೂ ಹಲವು ಆಕಾಂಕ್ಷಿಗಳು ಟಿಕೆಟ್‍ಗಾಗಿ ಮನವಿ ಮಾಡುತ್ತಿದ್ದಾರೆ.

ಗೆಲುವಿನ ಸಾಧ್ಯತೆ, ಸಾಧಕ-ಬಾಧಕ ನೋಡಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಬೇಕೆಂದು ತೀರ್ಮಾನ ಮಾಡಲಿದೆ ಎಂದು ಸೋಮಶೇಖರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News