ಪ್ರಥಮ ಪಿಯುಸಿ ಯೂಟ್ಯೂಬ್ ತರಗತಿಗಳ ರೆರ್ಕಾಡಿಂಗ್ ಕಾರ್ಯಕ್ರಮದ ಉದ್ಘಾಟನೆ

Update: 2020-10-01 12:33 GMT

ಕಾಪು, ಅ.1: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶು ಪಾಲರ ಸಂಘ, ಉಪನ್ಯಾಸಕರ ಸಂಘ ಮತ್ತು ವಿವಿಧ ವಿಷಯಗಳ ವೇದಿಕೆಯ ವತಿಯಿಂದ ಬಂಟಕಲ್ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದೊಂದಿಗೆ ಪ್ರಥಮ ಪಿಯುಸಿ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಹಾಗೂ ಜೀವಶಾಸ್ತ್ರ ವಿಷಯಗಳ ಯೂಟ್ಯೂಬ್ ತರಗತಿಗಳ ರೆರ್ಕಾಡಿಂಗ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಅ.1ರಂದು ಮಹಾವಿದ್ಯಾಲಯದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಭಗವಂತ ಕಟ್ಟಿಮನಿ ಮಾತನಾಡಿ, ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಆನ್‌ಲೈನ್ ಬೋಧನೆಯ ಮಹತ್ವವನ್ನು ವಿವರಿಸಿ ಪದವಿ ಪೂರ್ವಶಿಕ್ಷಣ ಇಲಾಖೆಯು ಈ ನಿಟ್ಟಿನಲ್ಲಿ ವಿವಿಧ ಕ್ರಮ ಗಳನ್ನು ತೆಗೆದುಕೊಳ್ಳುತ್ತಿದೆ ಎಂದರು. ಅಧ್ಯಾಪಕರು ಪಾಠಕ್ಕೆ ಸಂಬಂದಿಸಿದ ಎಲ್ಲಾ ವಿಷಯಗಳನ್ನು ತುಂಬಾ ಪ್ರೇರಣಾತ್ಮಕವಾಗಿ ವಿದ್ಯಾರ್ಥಿ ಗಳಿಗೆ ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಯೂಟ್ಯೂಬ್ ತರಗತಿಗಳ ಮೂಲಕ ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.

ಸೋದೆ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ದಯಾನಂದ ಪೈ, ಉಪನ್ಯಾಸಕ ಸಂಘದ ಅಧ್ಯಕ್ಷ ಡಿ.ಕೆ. ಮೊಗೇರ್, ಡಾ.ಸುಮ, ಉಪನ್ಯಾಸಕ ಸಂಘದ ಕಾರ್ಯದರ್ಶಿ ಹಾಗೂ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ತಿರು ಮಲೇಶ್ವರ ಭಟ್ ಮೊದಲಾದವರು ಉಪಸ್ಥಿತರಿದ್ದರು. ರಮ್ಯಶ್ರೀ ಕಾರ್ಯಕ್ರಮ ಸಂಯೋಜಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News