ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Update: 2020-10-01 14:16 GMT

ಬೆಂಗಳೂರು, ಅ. 1: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2020ನೆ ವಿಕಲಚೇತನರ ಸಾಲಿನ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರತಿವರ್ಷ ಡಿಸೆಂಬರ್ 3ರಂದು `ವಿಶ್ವ ವಿಕಲಚೇತನರ ದಿನಾಚರಣೆ'ಯ ಸಂದರ್ಭದಲ್ಲಿ ಸರಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ 15 ವ್ಯಕ್ತಿಗಳು, ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ 8 ಸಂಸ್ಥೆಗಳು, ವಿಶಿಷ್ಟ ಸಾಧನೆಗೈದಿರುವ 2 ಸಂಸ್ಥೆಗಳು ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ 5 ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ.

ಆಸಕ್ತರು ಅರ್ಜಿಗಳನ್ನು ತಮ್ಮ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅಥವಾ ಇಲಾಖೆಯ ವೆಬ್‍ಸೈಟ್‍ನಿಂದ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅ.20ರೊಳಗೆ ಸಂಬಂಧಿಸಿದ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ-080-2286 0907 ಅನ್ನು ಸಂಪರ್ಕಸಲು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News