ಅ.3: ಬ್ಯಾರಿ ಭಾಷಾ ದಿನಾಚರಣೆ

Update: 2020-10-01 17:02 GMT

ಮಂಗಳೂರು, ಅ.1: ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಅ.3ರಂದು ಬೆಳಗ್ಗೆ 9:30ಕ್ಕೆ ನಗರದ ಹೊಟೇಲ್ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಬ್ಯಾರಿ ಭಾಷಾ ದಿನಾಚರಣೆ ನಡೆಯಲಿದೆ.

ಪರಿಷತ್‌ನ ಗೌರವಾಧ್ಯಕ್ಷ ಜೆ. ಹುಸೈನ್‌ರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ಮುಹಮ್ಮದ್ ನಝೀರ್ ಬ್ಯಾರಿ ಭಾಷಾ ನೋಂದಣಿ ಭೂದಾಖಲೆಯನ್ನು ಬಿಡುಗಡೆಗೊಳಿಸಲಿದ್ದಾರೆ. ಪರಿಷತ್‌ನ ಗೌರವ ಸಲಹೆಗಾರ ಬಿಎಂ ಮುಮ್ತಾಝ್ ಅಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ.

ಅತಿಥಿಗಳಾಗಿ ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ, ಸಾಮಾಜಿಕ ಮುಖಂಡ ಮುಹಮ್ಮದ್ ಕುಂಞಿ ವಿಟ್ಲ, ಕಾರ್ಪೊರೇಟರ್ ಅಬ್ದುಲ್ ಲತೀಫ್ ಕಂದಕ್, ಸಿವಿಲ್ ಸರ್ವಿಸ್ ತರಬೇತುದಾರೆ ಫರ್ಝಾನ ಯು.ಟಿ., ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ, ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎಂ.ಅಸ್ಲಮ್ ಭಾಗವಹಿಸಲಿದ್ದಾರೆ ಎಂದು ಪರಿಷತ್‌ನ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News