ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ

Update: 2020-10-01 17:19 GMT

ಮಂಗಳೂರು, ಅ.1: ನಗರದ ಪಿ.ಎಂ. ರಾವ್ ರಸ್ತೆಯಲ್ಲಿರುವ ಲಾಡ್ಜ್ವೊಂದರಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಪೊಲೀಸರು ಬುಧವಾರ ತಡರಾತ್ರಿ ಬಂಧಿಸಿದ್ದಾರೆ.

ಮಂಗಳೂರು ನಗರ ನಿವಾಸಿಗಳಾದ ಹರಿಪ್ರಸಾದ್ ಮತ್ತು ಶಶಿಧರ ಬಂಧಿತರು. ಬಂಧಿತರಿಂದ 1.20 ಲಕ್ಷ ರೂ. ನಗದು, ಆರು ಮೊಬೈಲ್ ಫೋನ್ ಮತ್ತು ಟಿವಿ ವಶಪಡಿಸಿಕೊಂಡಿದ್ದಾರೆ.

ಲಾಡ್ಜ್‌ನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಇಬ್ಬರು ಬಂಧನಕ್ಕೊಳಗಾಗಿದ್ದು, ಐವರು ಪರಾರಿಯಾಗಿದ್ದಾರೆ. ಪರಾರಿಯಾದವರ ವಿವರ ಲಭ್ಯವಾಗಿದ್ದು, ಅವರ ಬಂಧನ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಂಗಳೂರು ಉತ್ತರ (ಬಂದರ್) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News