ಕೊರೋನದಿಂದ ಮೃತಪಟ್ಟವರ ಸಂಖ್ಯೆ 10 ಲಕ್ಷಕ್ಕಿಂತ ಹೆಚ್ಚು: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

Update: 2020-10-01 17:22 GMT

ಅಜಿನೀವ (ಸ್ವಿಟ್ಸರ್‌ಲ್ಯಾಂಡ್), ಅ. 1: ಕೊರೋನ ವೈರಸ್‌ನಿಂದಾಗಿ ಸಂಭವಿಸಿದ ಸಾವುಗಳ ವಾಸ್ತವಿಕ ಸಂಖ್ಯೆ ಖಂಡಿತವಾಗಿಯೂ 10 ಲಕ್ಷಕ್ಕಿಂತ ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್ ಬುಧವಾರ ಹೇಳಿದ್ದಾರೆ.

ವಿಶ್ವಸಂಸ್ಥೆಯ ವಾರ್ಷಿಕ ಮಹಾಧಿವೇಶನದಲ್ಲಿ ಮಾತನಾಡಿದ ಅವರು, ‘‘ಈ ಸಾಂಕ್ರಾಮಿಕದಿಂದಾಗಿ 10 ಲಕ್ಷ ಜನರು ಸತ್ತಿರುವುದು ಖಚಿತವಾಗಿದೆ. ನೈಜ್ಯ ಸಂಖ್ಯೆಯು ನಿಜವಾಗಿಯೂ ಹೆಚ್ಚಾಗಿದೆ. ಜಗತ್ತಿನಾದ್ಯಂತ ಆಸ್ಪತ್ರೆಗಳಲ್ಲಿ ಸಾವಿರಾರು ಮಂದಿ ಜೀವನ್ಮರಣ ಹೋರಾಟದಲ್ಲಿದ್ದಾರೆ’’ ಎಂದು ಹೇಳಿದರು.

ಈ ನಡುವೆ, ಕೊರೋನ ವೈರಸ್ ಪರೀಕ್ಷೆಗಳು ಮತ್ತು ಚಿಕಿತ್ಸೆಗಳು ಹೆಚ್ಚು ಜನರಿಗೆ ತಲುಪುವಂತೆ ಜೊತೆಯಾಗಿ ಕೆಲಸ ಮಾಡುವಂತೆ ಹಾಗೂ ‘ಜಾಗತಿಕ ಸಾರ್ವಜನಿಕ ಒಳಿತಿ’ಗಾಗಿ ಲಸಿಕಾ ಕಾರ್ಯಕ್ರಮಕ್ಕೆ ಬೆಂಬಲ ನೀಡುವಂತೆ ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಸದಸ್ಯ ದೇಶಗಳನ್ನು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News