ಹತ್ರಸ್ ನ ಗ್ರಾಮವನ್ನು ಸರಕಾರ ಕಂಟೈನ್ಮೆಂಟ್ ವಲಯವಾಗಿ ಘೋಷಿಸುವ ಸಾಧ್ಯತೆ: ಜಿಲ್ಲಾ ದಂಡಾಧಿಕಾರಿ

Update: 2020-10-01 17:33 GMT

ಲಕ್ನೋ, ಅ. 1: ಕೊರೋನ ಪರೀಕ್ಷೆ ಮಾಡಿಸಿಕೊಳ್ಳುವಂತೆ ಪೊಲೀಸರಲ್ಲಿ ವಿನಂತಿಸಲಾಗಿದೆ. ಒಂದು ವೇಳೆ ಅವರ ಪರೀಕ್ಷಾ ವರದಿ ಪಾಸಿಟಿವ್ ಬಂದರೆ, ಸರಕಾರ ಹತ್ರಸ್ ನ ಗ್ರಾಮವನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸುವ ಸಾಧ್ಯತೆ ಇದೆ. ಅನಂತರ ಮಾಧ್ಯಮದವರು ಸೇರಿದಂತೆ ಹೊರಗಿನವರಿಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗುವುದು ಎಂದು ಹತ್ರಸ್ ನ ಜಿಲ್ಲಾ ದಂಡಾಧಿಕಾರಿ ಪ್ರವೀಣ್ ಕುಮಾರ್ ಹೇಳಿದ್ದಾರೆ.

ದಲಿತ ಯುವತಿಯ ವೈದ್ಯಕೀಯ ಪರೀಕ್ಷೆಯ ವರದಿ ಬಗ್ಗೆ ಮಾತನಾಡಿದ ಅವರು, ಯುವತಿಯ ಗುಪ್ತಾಂಗದಲ್ಲಿ ಯಾವುದೇ ಗಾಯಗಳಾಗಿಲ್ಲ. ಮಾದರಿಯನ್ನು ಆಗ್ರಾದ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿದೆ. ಮೂರು ದಿನಗಳಲ್ಲಿ ವರದಿ ಬರುವ ಸಾಧ್ಯತೆ ಇದೆ. ವರದಿ ಬಂದ ಬಳಿಕ ಇದು ಸಾಮೂಹಿಕ ಅತ್ಯಾಚಾರವೇ? ಅಲ್ಲವೇ ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದಿದ್ದಾರೆ.

 ‘‘ಭಗವಾನ್ ಸ್ವರೂಪ್ ನೇತೃತ್ವದ ಹಾಗೂ ಇತರ ಇಬ್ಬರು ಸದಸ್ಯರನ್ನು ಒಳಗೊಂಡ ಸಿಟ್ ತಂಡ ಹತ್ರಸ್ ಗೆ ತಲುಪಿದೆ. ತಂಡ ಗುರುವಾರ ಗ್ರಾಮದಲ್ಲಿ ಬಾಲಕಿಯ ಕುಟುಂಬದವರೊಂದಿಗೆ ಮಾತುಕತೆ ನಡೆಸಿದೆ. ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಅಲ್ಲದೆ ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿದೆ’’ ಎಂದು ಅವರು ತಿಳಿಸಿದ್ದಾರೆ.

 ‘‘ಹತ್ರಸ್ ಜಿಲ್ಲೆಯಲ್ಲಿ 144 ಸೆಕ್ಷನ್ ಹಾಕಲಾಗಿದೆ. ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ’’ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News