ಒಕ್ಕೆತ್ತೂರು ಪರಿಸರದಲ್ಲಿ ತ್ಯಾಜ್ಯ ನಿರ್ವಹಣೆ ಅವ್ಯವಸ್ಥೆ: ವಿಟ್ಲ ಪ.ಪಂ.ಗೆ ವೆಲ್ಫೇರ್ ಪಾರ್ಟಿಯಿಂದ ಮನವಿ

Update: 2020-10-02 06:38 GMT

ವಿಟ್ಲ, ಅ.2: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಒಕ್ಕೆತ್ತೂರು ಒಳರಸ್ತೆಯಲ್ಲಿರುವ, ಒಕ್ಕೆತ್ತೂರು ಮತ್ತು ಸುರುಂಬಡ್ಕ ಆಸುಪಾಸಿನ ಪ್ರದೇಶಗಳಿಗೆ ತ್ಯಾಜ್ಯ ಸಂಗ್ರಹ ವಾಹನ ಸರಿಯಾಗಿ ಬರುತ್ತಿಲ್ಲ. ಇದರಿಂದ ಪರಿಸರದಲ್ಲಿ ದುರ್ನಾತ ಹಬ್ಬುತ್ತಿದ್ದು, ಅಲ್ಲಿನ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಈ ಸಮಸ್ಯೆಯನ್ನು ಕೂಡಲೇ ಪರಿಹರಿಸುವಂತೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವಿಟ್ಲ ಪಟ್ಟಣ ಪಂಚಾಯತ್ ಘಟಕವು ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿಯವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವಿಟ್ಲ ಪಟ್ಟಣ ಪಂಚಾಯತ್ ಘಟಕದ ಅಧ್ಯಕ್ಷ ಎಂ.ಎ.ರಹಿಮಾನ್ ಕಲ್ಲಂಗಳ ಮತ್ತು ಕಾರ್ಯದರ್ಶಿ ಅಬ್ದುಲ್ಲ ಕುಂಞಿ ಮನವಿ ಸಲ್ಲಿಸಿದ್ದು, ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ  ಮುಖ್ಯಾಧಿಕಾರಿ, ಸಮಸ್ಯೆ  ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News