ಗಾಂಧಿ ಆಶಯದಂತೆ ಸ್ವಚ್ಛತೆಗೆ ಆದ್ಯತೆ ನೀಡೋಣ: ಮೇಯರ್ ದಿವಾಕರ ಪಾಂಡೇಶ್ವರ
Update: 2020-10-02 18:44 IST
ಮಂಗಳೂರು, ಅ.2: ಮಹಾತ್ಮ ಗಾಂಧೀಜಿಯ ಆಶಯದಂತೆ ಸ್ವಚ್ಛ ಮಂಗಳೂರು ಪರಿಕಲ್ಪನೆ ಸಾಕಾರಗೊಳಿಸುವಲ್ಲಿ ಮನಪಾ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಪ್ರತಿ ಮನೆ, ಉದ್ದಿಮೆಗಳು ತ್ಯಾಜ್ಯವನ್ನು ಹಸಿ ಕಸ ಹಾಗೂ ಒಣಕಸ ಪ್ರತ್ಯೇಕಿಸಿ ನೀಡಬೇಕು ಎಂದು ಮೇಯರ್ ದಿವಾಕರ ಪಾಂಡೇಶ್ವರ ಹೇಳಿದ್ದಾರೆ.
ನೆಹರು ಯುವ ಕೇಂದ್ರ ಮಂಗಳೂರು, ಯುವಕ, ಯುವತಿ ಮತ್ತು ಮಹಿಳಾ ಮಂಡಳಿ ದ.ಕ. ಜಿಲ್ಲೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಸಹಯೋಗದೊಂದಿಗೆ ನಗರದ ವಿವಿ ಕಾಲೇಜು ರವೀಂದ್ರ ಕಲಾಭವನದಲ್ಲಿ ಶುಕ್ರವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲ ಡಾ. ಉದಯಕುಮಾರ್ ಎಂ.ಎ., ವಕೀಲ ದಿನಕರ ಶೆಟ್ಟಿ ಅತಿಥಿಗಳಾಗಿದ್ದರು.
ನೆಹರು ಯುವ ಕೇಂದ್ರ ಜಿಲ್ಲಾ ಸಮನ್ವಯಾಧಿಕಾರಿ ರಘುವೀರ್ ಸೂಟರ್‌ಪೇಟೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.