ಉಡುಪಿ : 212 ಮಂದಿಗೆ ಕೋವಿಡ್ ಸೋಂಕು ದೃಢ, ಓರ್ವ ಬಲಿ
ಉಡುಪಿ, ಅ. 2: ರಾಜ್ಯ ಆರೋಗ್ಯ ಇಲಾಖೆ ಇಂದು ರಾತ್ರಿ ಪ್ರಕಟಿಸಿದ ಕೋವಿಡ್-19 ರಾಜ್ಯ ಬುಲೆಟಿನ್‌ನಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 212 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಪಾಸಿಟಿವ್ ದೃಢಪಟ್ಟವರ ಸಂಖ್ಯೆ 17,631ಕ್ಕೇರಿದೆ. ಅಲ್ಲದೇ ದಿನದಲ್ಲಿ 68 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದು, ಹೀಗೆ ಮನೆಗೆ ತೆರಳಿದರ ಒಟ್ಟು ಸಂಖ್ಯೆ 15,365ಕ್ಕೇರಿದೆ.
ಓರ್ವ ಬಲಿ: ಜಿಲ್ಲೆಯಲ್ಲಿ ಸದ್ಯ 2116 ಸಕ್ರೀಯ ಕೋವಿಡ್ ಪ್ರಕರಣಗಳಿವೆ. ಶುಕ್ರವಾರ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಒಬ್ಬರು ಬಲಿಯಾ ಗಿದ್ದು, ಇದರಿಂದ ಈವರೆಗೆ ಕೋವಿಡ್‌ಗೆ ಬಲಿಯಾದವರ ಒಟ್ಟು ಸಂಖ್ಯೆ 151ಕ್ಕೇರಿದೆ.
ಮುಷ್ಕರ ಮುಂದುವರಿಕೆ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ)ದ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದೂ ಸಹ ಮುಂದುವರಿದಿದೆ. ಇಂದು ಮುಷ್ಕರನಿರತರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಗಳ ಕಚೇರಿ ಎದುು ಧರಣಿ ಸತ್ಯಾಗ್ರಹ ನಡೆಸಿದರು.