ಮಲ್ಪೆ ಬೀಚ್: ಗಾಂಧಿ ಜಯಂತಿ ಆಚರಣೆ

Update: 2020-10-02 14:07 GMT

ಮಲ್ಪೆ, ಅ.2: ಗಾಂಧಿ ಜಯಂತಿ ಪ್ರಯುಕ್ತ ಮಲ್ಪೆ ಬೀಚ್ ಬಳಿಯಲ್ಲಿರುವ ಗಾಂಧೀಜಿ ಪ್ರತಿಮೆಗೆ ಶಾಸಕ ಕೆ. ರಘುಪತಿ ಭಟ್ ಸೇರಿದಂತೆ ಗಣ್ಯರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಪೋಲಿಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರ ಸಭೆಯ ಪೌರಾಯುಕ್ತ ಆನಂದ್ ಸಿ.ಕಲ್ಲೋಳಿಕರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಮತ್ತು ಸ್ಕೌಟ್-ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News