ಸಚಿವ ಶ್ರೀಮಂತ ಪಾಟೀಲ್ ಗೆ ಕೊರೋನ ಸೋಂಕು ದೃಢ

Update: 2020-10-02 14:09 GMT

ಬೆಳಗಾವಿ, ಅ.2: ಜವಳಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಕೋವಿಡ್-19 ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ, ನಿಮ್ಮ ಸೇವೆಗೆ ಮರಳುತ್ತೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News