×
Ad

ಡ್ರಗ್ಸ್ ಜಾಲದ ತನಿಖೆಯಲ್ಲಿ ಯಾವುದೇ ಲೋಪವಾಗಿಲ್ಲ: ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್

Update: 2020-10-02 19:49 IST

ಬೆಂಗಳೂರು, ಅ.2: ಡ್ರಗ್ಸ್ ಜಾಲದ ತನಿಖೆ ಸರಾಗವಾಗಿ ನಡೆಯುತ್ತಿದ್ದು, ಎಫ್‍ಎಸ್‍ಎಲ್ ವರದಿಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧಿಸಿರುವ ಕೆಲವರಿಂದ ರಕ್ತ, ಕೂದಲು ಮಾದರಿ ಹಾಗೂ ಮೊಬೈಲ್ ಫೋನ್‍ಗಳನ್ನು ಹೈದರಾಬಾದ್‍ನ ಎಫ್‍ಎಸ್‍ಎಲ್‍ಗೆ ರವಾನಿಸಲಾಗಿತ್ತು. ಆದರೆ, ಕೆಲ ತಾಂತ್ರಿಕ ಕಾರಣಗಳಿಂದಾಗಿ ಕೂದಲಿನ ಮಾದರಿ ವಾಪಸ್ ಆಗಿದೆ. ಅದನ್ನು ಮತ್ತೊಮ್ಮೆ ಸಂಗ್ರಹಿಸಿ ರವಾನಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿಗಳು ಸತ್ಯಕ್ಕೆ ದೂರವಾದುದು ಎಂದು ಅವರು ತಿಳಿಸಿದ್ದಾರೆ.

ಯಾವುದೇ ತನಿಖೆ ಕೂದಲಿನ ಆಧಾರದ ಮೇಲೆ ಮಾತ್ರ ನಡೆಯುವುದಿಲ್ಲ. ಹೀಗಾಗಿ, ಡ್ರಗ್ಸ್ ಜಾಲದ ತನಿಖೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ವಿವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News