ಕೋವಿಡ್19: ರಾಜ್ಯ ರಾಜಧಾನಿಯಲ್ಲಿ 3 ಸಾವಿರ ದಾಟಿದ ಮೃತರ ಸಂಖ್ಯೆ

Update: 2020-10-02 15:59 GMT

ಬೆಂಗಳೂರು, ಅ.2: ನಗರದಲ್ಲಿ ಶುಕ್ರವಾರ ಒಂದೇ ದಿನ 4,259 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 2298 ಸೋಂಕಿತರು ಬಿಡುಗಡೆಯಾಗಿದ್ದು, 47 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 2,41,775 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 3,024 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,87,361 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 51,389 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 26,69,968 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಗುರುವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ನಗರದಲ್ಲಿ ಒಟ್ಟು ಸಕ್ರಿಯ 16 ಕಂಟೈನ್ಮೆಂಟ್ ಝೋನ್‍ಗಳಿವೆ. ನಗರದ 6,44,507 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 7,74,811 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 17,19,566 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.13.64ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.26ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.78.47ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News