×
Ad

ಡ್ರಗ್ಸ್ ಪ್ರಕರಣ: ಬಂಧಿತ ಇಬ್ಬರಿಗೆ ಪೊಲೀಸ್ ಕಸ್ಟಡಿ

Update: 2020-10-02 21:34 IST

ಮಂಗಳೂರು, ಅ.2: ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನೈಜೀರಿಯಾ ಪ್ರಜೆ ಸಹಿತ ಮೂವರ ಪೈಕಿ ಇಬ್ಬರನ್ನು ಸಿಸಿಬಿ ಪೊಲೀಸರು ಅ.4ರ ತನಕ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.

ನೈಜೀರಿಯ ಪ್ರಜೆ ಫ್ರಾಂಕ್ ಸಂಡೇ ಇಬೆಬುಚಿ (33) ಹಾಗೂ ಕೂಳೂರು ಗುಡ್ಡೆಯಂಗಡಿಯ ಶಮೀನ್ ಫರ್ನಾಂಡಿಸ್ ಯಾನೆ ಶ್ಯಾಮ್ (28) ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ತೊಕ್ಕೊಟ್ಟು ನಿವಾಸಿ ಶಾನ್ ನವಾಝ್ (34) ಎಂಬವರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಈ ಹಿಂದೆ ಬಂಧಿತರಾಗಿದ್ದ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ನೈಜೀರಿಯಾ ಪ್ರಜೆ ಸಹಿತ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರು ಹಾಗೂ ಮುಂಬೈಯಲ್ಲಿ ಬಂಧಿಸಿದ್ದರು. ಇವರು ಮುಂಬೈ, ಗೋವಾ, ಬೆಂಗಳೂರು ಸಹಿತ ವಿವಿಧೆಡೆಯಿಂದ ಮಂಗಳೂರು ನಗರಕ್ಕೆ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಕೊರೋನ ನೆಗೆಟಿವ್: ಬಂಧಿತ ಎಲ್ಲ ಆರೋಪಿಗಳಿಗೆ ಕೊರೋನ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News