ಬೊಲೆರೊ- ಟಾಟಾ ಏಸ್ ನಡುವೆ ಭೀಕರ ಅಪಘಾತ: ಆರು ಮಂದಿ ಸ್ಥಳದಲ್ಲೇ ಸಾವು

Update: 2020-10-02 17:38 GMT

ಬೆಳಗಾವಿ: ಬೊಲೆರೊ ಮತ್ತು ಟಾಟಾ ಏಸ್ ವಾಹನ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಸವದತ್ತಿ- ಧಾರವಾಡ ರಸ್ತೆಯಲ್ಲಿರುವ ಪುರಸಭೆ ಕಸ ವಿಲೇವಾರಿ ಸಂಕೀರ್ಣದ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.

ಅಪಘಾತದ ತೀವ್ರತೆಗೆ ವಾಹನಗಳು ನುಜ್ಜು ಗುಜ್ಜಾಗಿವೆ. ಮೃತರ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಸುಮಾರು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚುಂಚನೂರ ಹಾಗೂ ಜಕಬಾಳ ಗ್ರಾಮಗಳ ಕೂಲಿ ಕಾರ್ಮಿಕರು ಧಾರವಾಡ ಜಿಲ್ಲೆಯ ಮೊರಬ್ ಗ್ರಾಮದ ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿ ವಾಪಸಾಗುವಾಗ ಘಟನೆ ನಡೆದಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News