×
Ad

ಕಾಲಿಗೆ ಗುಂಡು ಹಾರಿಸಿ ರೌಡಿ ಶೀಟರ್ ಸೆರೆ

Update: 2020-10-03 16:22 IST

ಬೆಂಗಳೂರು, ಅ.3: ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪದಡಿ ರೌಡಿಯೋರ್ವನನ್ನು ಸಂಪಿಗೆಹಳ್ಳಿ ಠಾಣಾ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಸಂಪಿಗೆಹಳ್ಳಿ ಠಾಣೆಯ ರೌಡಿಶೀಟರ್ ಹನೀಫ್(29) ಬಂಧಿತ ಆರೋಪಿಯಾಗಿದ್ದು, ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿಗೆ ಅಂಗಡಿಯೊಂದರಲ್ಲಿ ಸಿಗರೇಟ್ ಸೇದಿರುವ ಹನೀಫ್, ಹಣ ಕೇಳಿದ ಮಹಿಳೆ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಕುದಿಯುತ್ತಿದ್ದ ಎಣ್ಣೆ ಮೇಲೆ ತಳ್ಳಿ ಪರಾರಿ ಆಗಿದ್ದ. ಈ ಸಂಬಂಧ ಮಹಿಳೆ ಸಂಪಿಗೆಹಳ್ಳಿ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು, ಬಾಗಲೂರಿನಲ್ಲಿ ಆರೋಪಿ ಇರುವುದನ್ನು ಪತ್ತೆ ಹಚ್ಚಿ ಹಿಡಿಯಲು ಹೋಗಿದ್ದಾರೆ. ಈ ವೇಳೆ ಹನೀಫ್ ಪೊಲೀಸ್ ಸಿಬ್ಬಂದಿಗೆ ಚಾಕು ಇರಿಯಲು ಮುಂದಾಗಿದ್ದಾನೆ ಎನ್ನಲಾಗಿದೆ.

ಆತ್ಮರಕ್ಷಣೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News